ಕರ್ನಾಟಕ ಉಚ್ಚ ನ್ಯಾಯಾಲಯದ 6 ನೂತನ ನ್ಯಾಯಾದೀಶರ ಪ್ರಮಾಣವಚನ
ಲೋಕಭವನದಲ್ಲಿ ನಡೆದ ಕರ್ನಾಟಕ ಉಚ್ಚ ನ್ಯಾಯಾಲಯದ 6 ನೂತನ ಹೆಚ್ಚುವರಿ ನ್ಯಾಯಾಧೀಶರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕರ್ನಾಟಕದ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು ಉಪಸ್ಥಿತರಿದ್ದರು.
ಕರ್ನಾಟಕ ಉಚ್ಚ ನ್ಯಾಯಾಲಯದ ಆರು ನೂತನ ಹೆಚ್ಚುವರಿ ನ್ಯಾಯಮೂರ್ತಿಗಳು ಆಗಸ್ಟ್ 9, 2026ರಂದು ಬೆಂಗಳೂರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಅವರಿಗೆ ಅಧಿಕಾರದ ಪ್ರಮಾಣವಚನ ಬೋಧಿಸಿದರು.
ನೂತನ ನ್ಯಾಯಮೂರ್ತಿಗಳು
ರಾಘವೇಂದ್ರ ಸೀತಾರಾಂ ಶ್ರೀವತ್ಸ
ಹೇಮಾ ಕುಲಕರ್ಣಿ
ಸುಬ್ರಹ್ಮಣ್ಯ ರಂಗರಾವ್
ತಡಗವಾಡಿ ಪ್ರಕಾಶ್ ವಿವೇಕಾನಂದ
ಬಕ್ಕೇಶ್ವರ ಪ್ರಮೋದ್
ಹೊಂಬೇಗೌಡ ಶಾಂತಿ ಭೂಷಣ್
ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹೈಕೋರ್ಟ್‌ನ ಇತರ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇವರು ಮೊದಲಿಗೆ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ. ಸಾಮಾನ್ಯವಾಗಿ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕಾತಿ ನಿಗದಿತ ಅವಧಿಗೆ ಇರುತ್ತದೆ; ನಂತರ ಅವರ ಸೇವೆ, ಅಗತ್ಯ ಮತ್ತು ಕೊಲಿಜಿಯಂ/ಸರ್ಕಾರದ ಪ್ರಕ್ರಿಯೆ ಆಧರಿಸಿ ಶಾಶ್ವತ ನ್ಯಾಯಮೂರ್ತಿಗಳಾಗಿ ನೇಮಕ ಮಾಡುವ ಸಾಧ್ಯತೆ ಇರುತ್ತದೆ.
ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ರಾಘವೇಂದ್ರ ಸೀತಾರಾಮ್ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್ ಮತ್ತು ಹೊಂಬೇಗೌಡ ಶಾಂತಿ ಭೂಷಣ್ ಅವರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶುಭಾಶಯಗಳನ್ನು ಕೋರಿದ್ದಾರೆ.