ಸಿನಿಮಾ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಡಬಲ್ ಧಮಾಕಾ

ಸುದ್ದಿ ಡೆಸ್ಕ್· 5 min read
ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಡಬಲ್ ಧಮಾಕಾ

ಕಳೆದ ವಾರ ಬಿಡುಗಡೆಯಾದ ರಾಮಾಯಣ ಸಿನಿಮಾದ ಟ್ರೈಲರ್ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಅದರಲ್ಲೂ ರಾವಣನ ಪಾತ್ರದಲ್ಲಿ ರಾಕಿಂಗ್ ಸ್ಟಾರ್ಯಶ್ಜೀವತುಂಬಿದ್ದು, ಅವರ ಪಾತ್ರ ಎಲ್ಲರ ಮನಗೆದ್ದಿತ್ತು.

ಯಶ್ಅಭಿಮಾನಿಗಳಿಗೆ ಇದೀಗ ಡಬಲ್ಧಮಾಕಾ. ಅವರ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾಗಾಗಿ ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಯಶ್ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಗ್ಅಪ್ಡೇಟ್ನೀಡಿದ್ದಾರೆ.

y1.jfif


ಚಿತ್ರದಲ್ಲಿ ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ನಯನತಾರಾ, ಹುಮಾ ಖುರೇಷಿ ಮತ್ತು ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಬಹುತಾರಾಗಣ ಇರುವ ಸಿನಿಮಾ ಕನ್ನಡದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸುವ ನಿರೀಕ್ಷೆಯಲ್ಲಿದೆ.

ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದ್ದು, ಬಳಿಕ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದೆ. ಸಿನಿಮಾದಲ್ಲಿ ಯಶ್ ರಾಯ್ ಮತ್ತು ಟಿಕೆಟ್ ಎಂಬ ಎರಡು ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ

y4.jfif


ಗೀತು ಮೋಹನ್ದಾಸ್ ನಿರ್ದೇಶನದ ಟಾಕ್ಸಿಕ್ ಸಿನಿಮಾ ಸ್ಯಾಂಡಲ್ವುಡ್ನಿಂದ ಹಿಡಿದು ಹಾಲಿವುಡ್ವರೆಗೂ ಭಾರೀ ನಿರೀಕ್ಷೆ ಮೂಡಿಸಿದ್ದು, ಇದೀಗ ಟ್ರೈಲರ್ ಬಿಡುಗಡೆಯ ದಿನಾಂಕವೂ ರಿವೀಲ್ ಆಗಿದೆ.

 

ಆಗಸ್ಟ್ 8 ಶನಿವಾರ ಟಾಕ್ಸಿಕ್ ಚಿತ್ರದ ಟ್ರೈಲರ್ ಬಿಡುಗಡೆಯಾಗಲಿದೆ. ಆದರೆ, ಟ್ರೈಲರ್ ಯಾವ ಸಮಯಕ್ಕೆ ಬಿಡುಗಡೆಯಾಗಲಿದೆ ಎಂಬುದನ್ನು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ. ಇದೇ ವೇಳೆ, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಯಶ್ ಹೊಸ ಬ್ಲ್ಯಾಕ್ & ವೈಟ್ ಪೋಸ್ಟರ್ ಹಂಚಿಕೊಂಡಿದ್ದಾರೆ.

y3.jpg


ಹೊಸ ಪೋಸ್ಟರ್ನಲ್ಲಿ ಮಳೆಯ ನಡುವೆ ನಿಂತಿರುವ ಯಶ್ ಅವರ ಲುಕ್ ಅಭಿಮಾನಿಗಳ ಗಮನ ಸೆಳೆದಿದೆ. ಟೋಪಿ, ಉದ್ದನೆಯ ಕೋಟ್ ಧರಿಸಿ ಕೈಯಲ್ಲಿ ಬಂದೂಕು ಹಿಡಿದಿರುವ ಅವರ ಸ್ಟೈಲಿಶ್ ಲುಕ್ಗೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ

Comments

Leave a comment

Recommended Reading