ಕ್ರೈಂ ಸುದ್ದಿ

ಖಾಸಗಿ ವೀಡಿಯೋ ಲೀಕ್ ಮಾಡಿ ಬ್ಲಾಕ್‌ಮೇಲ್: ಇಬ್ಬರು ರೌಡಿಶೀಟರ್‌ಗಳ ವಿರುದ್ಧ ಸೈಬರ್ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳಾ ಪೊಲೀಸ್ ಅಧಿಕಾರಿ!

ಸುದ್ದಿ ಡೆಸ್ಕ್· 5 min read
ಖಾಸಗಿ ವೀಡಿಯೋ ಲೀಕ್ ಮಾಡಿ ಬ್ಲಾಕ್‌ಮೇಲ್: ಇಬ್ಬರು ರೌಡಿಶೀಟರ್‌ಗಳ ವಿರುದ್ಧ ಸೈಬರ್ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳಾ ಪೊಲೀಸ್ ಅಧಿಕಾರಿ!

ಖಾಸಗಿ ವೀಡಿಯೋ ಲೀಕ್ ಮಾಡಿ ಬ್ಲಾಕ್‌ಮೇಲ್: ಇಬ್ಬರು ರೌಡಿಶೀಟರ್‌ಗಳ ವಿರುದ್ಧ ಸೈಬರ್ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳಾ ಪೊಲೀಸ್ ಅಧಿಕಾರಿ!

ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ವಾಟ್ಸಾಪ್ ವೀಡಿಯೋ ಕಾಲ್‌ ತುಣುಕನ್ನು ಜಾಲತಾಣಗಳಲ್ಲಿ ವೈರಲ್ ಮಾಡಿ, ಪೊಲೀಸ್ ಇಲಾಖೆಗೆ ಮುಜುಗರ ಉಂಟುಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತ ಮಹಿಳಾ ಅಧಿಕಾರಿಯೇ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರೌಡಿಶೀಟರ್‌ಗಳಾದ ಧರ್ಮ ಹಾಗೂ ಸಾಯಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಅವರು ದೂರು ಸಲ್ಲಿಸಿದ್ದು, ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ.

c2.jfif

ಪ್ರಸ್ತುತ ಮೆಟ್ರೋ ನಿಲ್ದಾಣದ ಭದ್ರತಾ ಉಸ್ತುವಾರಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಈ ಮಹಿಳಾ ಅಧಿಕಾರಿ, ತಮಗೆ ಮದುವೆಯಾಗಿ ಮಕ್ಕಳಿದ್ದು ಸಮಾಜದಲ್ಲಿ ಒಳ್ಳೆಯ ಹೆಸರಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೆಲ ವರ್ಷಗಳ ಹಿಂದೆ ತಾವು ರೌಡಿಶೀಟರ್ ಧರ್ಮ ಜೊತೆ ಆಪ್ತತೆ ಹೊಂದಿದ್ದಾಗ ಆತನ ಜೊತೆ ವೀಡಿಯೋ ಕಾಲ್‌ನಲ್ಲಿ ಮಾತನಾಡಿದ್ದ ದೃಶ್ಯಗಳನ್ನು ಆತ ರಹಸ್ಯವಾಗಿ ರೆಕಾರ್ಡ್ ಮಾಡಿಕೊಂಡಿದ್ದ. ಬಳಿಕ ಆ ವೀಡಿಯೋವನ್ನು ಮತ್ತೊಬ್ಬ ರೌಡಿಶೀಟರ್ ಸಾಯಿಕುಮಾರ್‌ಗೆ ನೀಡಿ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿಸಿ ತಮ್ಮ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮಹಿಳಾ ಅಧಿಕಾರಿ ನೀಡಿದ ಈ ಸುದೀರ್ಘ ದೂರಿನ ಆಧಾರದ ಮೇಲೆ ಕಬ್ಬನ್ ಪಾರ್ಕ್ ಪೊಲೀಸರು ಎನ್‌ಸಿಆರ್ (NCR) ದಾಖಲಿಸಿಕೊಂಡಿದ್ದಾರೆ. ಆದರೆ ಈ ಪ್ರಕರಣ ಸಾಲು ಸಾಲು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಜೈಲಿನಲ್ಲಿದ್ದ ಕೈದಿಗೆ ಮೊಬೈಲ್ ಫೋನ್ ತಲುಪಿದ್ದು ಹೇಗೆ ಹಾಗೂ ವೀಡಿಯೋ ಹೊರಬಿಡುವ ಹಿಂದೆ ಯಾರದ್ದಾದರೂ ಪ್ರಭಾವಿ ಜಾಲ ಕೆಲಸ ಮಾಡುತ್ತಿದೆಯೇ ಎಂಬ ಸತ್ಯಾಸತ್ಯತೆಗಳನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Comments

Leave a comment

Recommended Reading